ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್ ) ನಲ್ಲಿ ವಿವಿಧ ವಿಭಾಗಗಳಲ್ಲಿ ಜೂನಿಯರ್ ಆಪರೇಟರ್ಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಪಡೆದು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಫೆ.10 ಕೊನೆಯ ದಿನವಾಗಿದೆ.
ಐಒಸಿಎಲ್ ನೇಮಕಾತಿ
ದಕ್ಷಿಣ ಭಾರತದ ಕೇಂದ್ರಗಳಾದ ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಪುದುಚೆರಿ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಐಒಸಿಎಲ್ ನೇಮಕಾತಿ
ದಕ್ಷಿಣ ಭಾರತದ ಕೇಂದ್ರಗಳಾದ ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಪುದುಚೆರಿ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ
- ಜೂನಿಯರ್ ಆಪರೇಟರ್ ಗ್ರೇಡ್-1ಹುದ್ದೆಗೆ ಐಟಿಐ ಹೊಂದಿರಬೇಕು.
- ಜೂನಿಯರ್ ಆಪರೇಟರ್ (ಏವಿಯೇಷನ್): ಹನ್ನೆರಡನೇ ತರಗತಿ ತೇರ್ಗಡೆಯಗಿರಬೇಕು.
- ಜೂನಿಯರ್ ಚಾರ್ಜ್ಮನ್ ಹುದ್ದೆಗೆ ಮೂರು ವರ್ಷಗಳ ಡಿಪ್ಲೊಮಾ ಪದವಿ ಹೊಂದಿರಬೇಕು.
ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್-ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಪ್ರಿಂಟ್ ಪಡೆದು, ಅಂಚೆ ಮೂಲಕ ಕಚೇರಿ ವಿಳಾಸಕ್ಕೆ ಕಳುಹಿಸಲು ಸೂಚಿಸಲಾಗಿದೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು
ಶೈಕ್ಷಣಿಕ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಅಂಕಪಟ್ಟಿಗಳು, ಜಾತಿ ಪ್ರಮಾಣ ಪತ್ರ ಮತ್ತು ಇನ್ನಿತರ ದಾಖಲೆಗಳನ್ನು ಸಲ್ಲಿಸತಕ್ಕದ್ದು.
ನೇಮಕಾತಿ ಪರೀಕ್ಷೆ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಅಯ್ಕೆ ಮಾಡಿಕೊಳ್ಳಲಾಗುತ್ತದೆ. ನೂರು ಅಂಕಗಳ ಈ ಪರೀಕ್ಷೆಯು ನೂರು ಪ್ರಶ್ನೆಗಳನ್ನು ಒಳಗೊಂಡಿದ್ದು, ಉತ್ತರಿಸಲು 90 ನಿಮಿಷಗಳ ಅವಧಿ ನೀಡಲಾಗಿರುತ್ತದೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2018
- ಅರ್ಜಿಯ ರೆಸಿಪ್ಟ್ ಪ್ರಿಂಟ್ ಪಡೆಯಲು ಕೊನೆಯ ದಿನಾಂಕ: 16-02-2018