ಭಾರತೀಯ ರೈಲ್ವೆ: 26502 ಹುದ್ದೆಗಳ ನೇಮಕಾತಿ





ಭಾರತೀಯ ರೈಲ್ವೆಯಲ್ಲಿ ಭಾರಿ ಪ್ರಮಾಣದ ನೇಮಕಾತಿಗೆ ಮುಂದಾಗಿದೆ. ಈ ಆರ್ಆರ್‌ಬಿ ಬರೋಬ್ಬರಿ 26502 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.
ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಎರಡು ವರ್ಷಗಳ ನಂತರ ನಡೆಯುತ್ತಿರುವ ಬೃಹತ್ ನೇಮಕಾತಿ ಇದಾಗಿದ್ದು, 17673 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳು ಮತ್ತು 8829 ಟೆಕ್ನಿಷಿಯನ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ 435 ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು 619 ಟೆಕ್ನಿಷಿಯನ್ ಹುದ್ದೆಗಳು ಲಭ್ಯವಿದ್ದು, ಬೆಂಗಳೂರಿನ ರೈಲ್ವೆ ನೇಮಕಾತಿ ಮಂಡಳಿಯ ಮೂಲಕ ನೇಮಕಾತಿ ನಡೆಯಲಿದೆ.
ಶೈಕ್ಷಣಿಕ ವಿದ್ಯಾರ್ಹತೆ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಸಂಬಂಧಪಟ್ಟ ವಿವಿಧ ಕಾಂಬಿನೇಶನ್ ನ ಇಂಜಿನಿಯರಿಂಗ್ ವಿಷಯಗಳಲ್ಲಿ ಮೂರು ವರ್ಷದ ಡಿಪ್ಲೊಮಾ ಮಾಡಿರುವವರು ಅರ್ಜಿ ಸಲ್ಲಿಸಬಹುದು. ಟೆಕ್ನಿಷಿಯನ್ ಹುದ್ದೆಗಳಿಗೆ ಎಸ್ಎಸ್ಎಲ್‌ಸಿ ವಿದ್ಯಾರ್ಹತೆ ಹೊಂದಿರುವ ಮತ್ತು ಎನ್‌ಸಿವಿಟಿ/ಎಸ್‌ಸಿವಿಟಿಯಿಂದ ಮನ್ನಣೆ ಪಡೆದ ಸಂಸ್ಥೆಯಿಂದ ಸಂಬಂಧಪಟ್ಟ ಟ್ರೇಡ್ ಗಳಲ್ಲಿ ಐಟಿಐ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಕೆ ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ

ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/- ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.250/-

ಆಯ್ಕೆ ವಿಧಾನ
ಅರ್ಹ ಅಭ್ಯರ್ಥಿಗಳನ್ನು ವಿವಿಧ ಹಂತಗಳ ಕಂಪ್ಯೂಟರ್ ಬೇಸ್ಡ್ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ನಡೆಸುವ ಮೂಲಕ ಅಯ್ಕೆ ಮಾಡಿಕೊಳ್ಳಲಾಗುವುದು

ಕೇಂದ್ರ ಕಛೇರಿ ವಿಳಾಸಗಳು
ಆಯಾ ರಾಜ್ಯಕ್ಕೆ ಸಂಬಂಧಿಸಿದಂತೆ ರೈಲ್ವೆ ನೇಮಕಾತಿ ಮಂಡಳಿಗಳ ವಿಳಾಸ ನೀಡಲಾಗಿದ್ದು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ


ನವೀನ ಹಳೆಯದು