ಐಡಿಬಿಐ ಬ್ಯಾಂಕ್ ನಲ್ಲಿ ಅವಶ್ಯವಿರುವ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಭಾರತದಾದ್ಯಂತ ಇರುವ ಶಾಖೆಗಳಲ್ಲಿ ನೇಮಕಾತಿ ನಡೆಯುತ್ತಿದ್ದು, ಒಟ್ಟು 760 ಹುದ್ದೆಗಳಿಗೆ ಆನ್-ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಐಡಿಬಿಐ ಬ್ಯಾಂಕ್ ನೇಮಕಾತಿ
ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನವಾಗಿದೆ
ಹುದ್ದೆಗಳ ವಿವರ
760 ಎಕ್ಸಿಕ್ಯೂಟಿವ್ ಹುದ್ದೆಗಳು ವಯೋಮಿತಿ: ಗರಿಷ್ಠ 25
ಶೈಕ್ಷಣಿಕ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರು ಪದವಿ ಹೊಂದಿರಬೇಕು.
ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.700/- ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.150/-
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಆನ್-ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 06-02-2018 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-02-2018 ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ