ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಕರ್ನಾಟಕ ತಂಡ ನಾಕೌಟ್ ಹಂತಕ್ಕೆ ಪ್ರವೇಶ ಪಡೆಯಬೇಕಾದರೆ ಶುಕ್ರವಾರ ಆಲೂರಿನ ಕೆಎಸ್‍ಸಿಎ ಮೈದಾನದಲ್ಲಿ ನಡೆಯಲಿರುವ ರೈಲ್ವೇಸ್ ವಿರುದ್ಧದ ಪಂದ್ಯವನ್ನು ಗೆಲ್ಲಲೇಬೇಕಿದೆ.
ಈ ಪಂದ್ಯದಲ್ಲಿ ಗೆದ್ದ ತಂಡ ಎ ಗ್ರೂಪ್‍ನಿಂದ ಕ್ವಾರ್ಟರ್ ಫೈನಲ್ ಪ್ರವೇಶಿಸಲಿದೆ. ಸೋತವರು ಟೂರ್ನಿಯಿಂದ ಹೊರ ಬೀಳಲಿದ್ದಾರೆ. ಆದರೆ ಮಹತ್ವದ ಪಂದ್ಯಕ್ಕೂ ಮುನ್ನವೇ ಕರ್ನಾಟಕ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.