ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..


ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಹೌದು ಕೆಎಸ್ಆರ್ಟಿಸಿ ಇದೀಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿಯೊಂದನ್ನು ನೀಡಿದೆ. ಫೈನಲ್ ಪರೀಕ್ಷೆಗಳನ್ನು ಬರೆಯಲು ತೆರಳುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ ಆರಂಭವಾಗಲಿದ್ದು ಅಂದಿನಿಂದ ಪರೀಕ್ಷೆ ಮುಗಿಯುವವರೆಗೂ ಕೆಎಸ್ಆರ್ಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಮತ್ತು ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೇಂದ್ರದಿಂದ ತಮ್ಮ ವಾಸಸ್ಥಳಕ್ಕೆ ಪ್ರಯಾಣಿಸಬಹುದು.

ನವೀನ ಹಳೆಯದು