ಮುಧೋಳ: ಮುಂದುವರಿದ ಕಬ್ಬು ಬೆಳೆಗಾರರ ಪ್ರತಿಭಟನೆ

ಬಾಗಲಕೋಟೆ:
 ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಹಾಗೂ ಕಬ್ಬಿಗೆ ಬರಬೇಕಾದ ಬಾಕಿ ಹಣ ವಸೂಲಿಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರಿದಿದ್ದು, ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣವಾಗಿದೆ. ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್​ಗಳನ್ನು ಮುಧೋಳ ತಾಲೂಕಿನ ಕುಳಲಿ ಗ್ರಾಮದ ಸಮೀಪ ಕೆಲವು ರೈತರು ತಡೆದಿದ್ದರು. ಬಳಿಕ ಕಬ್ಬು ತುಂಬಿದ್ದ 10ಕ್ಕೂ ಹೆಚ್ಚು ಟ್ರ್ಯಾಕ್ಟರ್​​ಗಳನ್ನು ಪಲ್ಟಿ ಮಾಡಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ರ್ಯಾಕ್ಟರ್ಗಳಲ್ಲಿ ಕಬ್ಬು ಸಾಗಿಸಲು ರಕ್ಷಣೆಗೆ ಬಂದಿದ್ದ ಎರಡು ಬೊಲೆರೋ ವಾಹನಗಳ ಮೇಲೆಯೂ ರೈತರ ಇನ್ನೊಂದು ಗುಂಪು ಕಲ್ಲು ತೂರಾಟ ನಡೆಸಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡುಬಂದ ಹಿನ್ನೆಲೆ ಮುಧೋಳ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ.

ನವೀನ ಹಳೆಯದು