ಲೋಕಾಪುರ : ಬಾಗಲಕೋಟ-ಕುಡಚಿ ರೈಲ್ವೆ ಮಾರ್ಗಕ್ಕಾಗಿ ನಡೆಸುತ್ತಿರುವ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ 6 ನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ ಭೇಟಿ ನೀಡಿದರುಲೋಕಾಪುರ : ಬಾಗಲಕೋಟ-ಕುಡಚಿ ರೈಲ್ವೆ ಮಾರ್ಗಕ್ಕಾಗಿ ನಡೆಸುತ್ತಿರುವ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ 6 ನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ ಭೇಟಿ ನೀಡಿದರು.
ನಂತರ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿ ಶೀಘ್ರವಾಗಿ ಖಜ್ಜಿಡೋಣಿಯಿಂದ ಲೋಕಾಪುರವರೆಗೆ 100 ಎಕರೆ ಭೂ ಸ್ವಾಧೀನಕ್ಕೆ ಜಿಲ್ಲಾಧಿಕಾರಿ ಹಾಗೂ ಜಮಖಂಡಿ ಉಪವಿಭಾಗಾಧಿಕಾರಿಯವರಿಗೆ ಶೀಘ್ರದಲ್ಲಿ ರೈತರಿಂದ ನೇರವಾಗಿ ಖರೀದಿ ಮಾಡಲು ಕಟ್ಟು ನಿಟ್ಟಿನ ನಿರ್ದೇಶನ ನೀಡಲಾಗುವುದು ಎಂದರು.
ಖಜ್ಜಿಡೋಣಿಯಿಂದ ಲೋಕಾಪುರವರೆಗೆ ಜಮೀನಿನ ಮಾಲೀಕರ ಜೊತೆಗೆ ಸಭೆ ನಡೆಸಿ, ಭೂ ಸ್ವಾಧೀನ ಕಾಯ್ದೆ ಪ್ರಕಾರ ಪರಿಹಾರ ನೀಡಿ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗುವುದು ಎಂದರು. ಭೂ ಸ್ವಾಧೀನ ಪಡಿಸಿಕೊಳ್ಳಲು ಅನುದಾನ ಕೊರತೆ ಇಲ್ಲ, ಹೆಚ್ಚಿನ ಅನುದಾನಕ್ಕೋಸ್ಕರ ಕಾರ್ಯದರ್ಶಿಯವರಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.
ಕರ್ನಾಟಕ ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ಧೀನ ಖಾಜಿ ಮಾತನಾಡಿ ರೈಲ್ವೆ ಮಾರ್ಗದ ಅವಶ್ಯಕತೆ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಸತ್ಯಾಗ್ರಹ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಭೇಟಿ ನೀಡಿ ಹೋರಾಟಕ್ಕ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಮಾತನಾಡಿ ಸೋಮವಾರ ಸದನದಲ್ಲಿ ಧರಣಿ ಸತ್ಯಾಗ್ರಹದ ಹೋರಾಟದ ಕುರಿತು ಪ್ರಸ್ತಾಪಿಸಿ ಸರಕಾರ ಗಮನಕ್ಕೆ ತಂದು ಹೆಚ್ಚಿನ ಅನುದಾನ ತರಲು ಶ್ರಮಿಸುತ್ತೇನೆ ಎಂದರು.