ಬಾಗಲಕೋಟೆ : ಜಿಲ್ಲೆಯ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ 8 ಸಹಾಯಕ ಸರಕಾರಿ ಅಭಿಯೋಜಕರು ವ ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ಪಧವಿದರರಾರಬೇಕು. ಜಿಲ್ಲೆಯ ಯಾವುದೇ ನ್ಯಾಯಾಲಯಗಳಲ್ಲಿ ಅರ್ಜಿ ಸಲ್ಲಿಸಲು ನಿಗಧಿಪಡಿಸಲಾಗಿರುವ ಕೊನೆಯ ದಿನಾಂಕಕ್ಕೆ ಮೂರು ವರ್ಷಗಳಿಗೆ ಕಡಿಮೆ ಇಲ್ಲದಂತೆ ವಕೀಲರಾಗಿ ಸೇವೆ ಸಲ್ಲಿಸುತ್ತಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 37 ವರ್ಷಗಳು, ಪ್ರವರ್ಗ-2ಎ,2ಬಿ,3ಎ,3ಬಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳ ವಯೋಮಿತಿ 42 ವರ್ಷಗಳಾಗಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಕೊನೆಯ ದಿನ ಜನವರಿ 21 ಸಾಯಂಕಾಲ 6.00 ಗಂಟೆಯೊಳಗಾಗಿ ಸದಸ್ಯ ಕಾರ್ಯದರ್ಶಿಗಳು ಸಹಾಯಕ ಸರಕಾರಿ ಅಭಿಯೋಜಕರು ವ ಸಹಾಯಕ ಸರ್ಕಾರಿ ವಕೀಲರ ಹುದ್ದೆಯ ಗುತ್ತಿಗೆ ಆಧಾರದ ನೇಮಕಾತಿ ಸಮಿತಿ ಮತ್ತು ಪ್ರಧಾನ ಸಕಾರಿ ಅಭಿಯೋಜಕರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆವರಣ ನವನಗರ, ಬಾಗಲಕೋಟೆ ಇವರಿಗೆ ಖುದ್ದಾಗಿ ಇಲ್ಲವೇ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ 08351-235364 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.