ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ ಚಾಲನೆ



ಜೂ.17:  ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಶಂಕುಸ್ಥಾಪನೆ  ಹಾಗೂ ಕುಳಲಿ ಗ್ರಾಮ ಪಂಚಾಯತಿ ಕಟ್ಟಡದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿಯವರಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ನೆರವೇರಿಸಿದರು. 


ಈ ವಸತಿ ಶಾಲೆಯನ್ನು 8.14 ಎಕರೆ ನಿವೇಶನದಲ್ಲಿ 26.40 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ 


ಅನುಕೂಲವಾಗಲಿದೆ. ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. 
ನಂತರ ಮುಧೋಳ್ ರನ್ನ ಸರ್ಕಲ್‌ ಬಳಿ 3.5 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಸಂದರ್ಭದಲ್ಲಿ ವಿವಿಧ ಮುಖಂಡರು ಉಪಸ್ಥಿತರಿದ್ದರು.
ನವೀನ ಹಳೆಯದು