ರೈತರಿಂದಲೇ ಸ್ವಯಂ ಬೆಳೆ ಸಮೀಕ್ಷೆ : ಡಿಸಿ ರಾಜೇಂದ್ರ


ಬಾಗಲಕೋಟೆ : ಪ್ರಸಕ್ತಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಇ-ಆಡಳಿತ ಇಲಾಖೆಯು ಹೊರತಂದ ನೂತನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಸ್ವಯಂ ರೈತರೇ ತಾವು ಬೆಳೆದಿರುವ ಬೆಳೆಯನ್ನು ನಮೂದಿಸಲು ಆಗಸ್ಟ್ ೨೪ ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.
ರಾಜೇಂದ್ರ ತಿಳಿಸಿದರು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಬೆಳೆ ಸಮೀಕ್ಷೆ ಕಾರ್ಯಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೆಳೆ ಸಮೀಕ್ಷೆ ಯೋಜನೆಯನ್ವಯ ಜಿಲ್ಲೆಯ ರೈತರು ತಮ್ಮ ಜಮೀನಿನಸರ್ವೆ ನಂಬರ, ಹಿಸ್ಸಾ ನಂಬರವಾರು ತಾವು ಬೆಳೆದ ಕೃಷಿ ಬೆಳೆ ಹಾಗು ಬಹುವಾರ್ಷಿಕ ತೋಟಗಾರಿಕೆ, ಅರಣ್ಯ ಇತರೆ ಬೆಳೆ ಸಮೀಕ್ಷೆ ೨೦೨೦ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಸ್ವತಃ ತಾವೇ ಬೆಳೆ ಸಮೀಕ್ಷೆ ಮೂಲಕ ನೋಂದಾಯಿಸಬಹುದಾಗಿದೆ ಎಂದು ತಿಳಿಸಿದರು. ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆಯಡಿ ಸರ್ವೆ ನಂಬರವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೆ ನಂಬರ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಈ ಬೆಳೆ ಸಮೀಕ್ಷೆಯಿಂದ ಅನುಕೂಲವಾಗಲಿದೆ ಎಂದರು. 
ನವೀನ ಹಳೆಯದು