ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಶುಕ್ರವಾರ ಡಿ.30 ರಂದು ನಿಧನರಾದರು. 2 ದಿನಗಳ ಹಿಂದೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು ತಮ್ಮ 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನೆಗೆ ಭೇಟಿ ನೀಡಿ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದು ತಾಯಿಯ ಪಾದ ತೊಳೆದು ಪೂಜಿಸಿದ್ದರು.