ಜಿಲ್ಲೆಯ ನಾಲ್ಕು ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ



ಮುಧೋಳ: ರೈತರಿಂದ ಪಡೆಯುವ ತೂಕದಲ್ಲಿ ಸಕ್ಕರೆ ಕಾರ್ಖಾನೆಗಳ ಮೋಸ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ಕಾರ್ಖಾನೆಗಳ ಮೇಲೆ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಆಯುಕ್ತರ ನಿರ್ದೇಶನಾಲಯದ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಾಜಿ ಸಚಿವ ಎಸ್.ಆರ್.ಪಾಟೀಲ ಅಧ್ಯಕ್ಷತೆಯ ಬೀಳಗಿ ಸಕ್ಕರೆ ಕಾರ್ಖಾನೆ, ಸಚಿವ ಮುರುಗೇಶ ನಿರಾಣಿ ಒಡೆತನದ ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆ ಹಾಗೂ ಬಿಜೆಪಿ ನಾಯಕ ಜಗದೀಶ ಗುಡಗುಂಟಿ ಒಡೆತನದ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಜಿಲ್ಲಾಡಳಿತ , ಪೊಲೀಸೆ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ನವೀನ ಹಳೆಯದು