Revenue Department Jobs: ರಾಜ್ಯ ಕಂದಾಯ ಇಲಾಖೆಯಲ್ಲಿ 2000 ಹುದ್ದೆಗಳಿಗೆ ಅರ್ಜಿ ಆಹ್ವಾನ

SSLR Recruitment 2023: ಸರ್ವೇ ಸೆಟಲ್​ಮೆಂಟ್​ & ಲ್ಯಾಂಡ್​ ರೆಕಾರ್ಡ್ಸ್​ ಕರ್ನಾಟಕ (Survey Settlement and Land Records Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2000 ಲೈಸೆನ್ಸ್​ಡ್​​ ಲ್ಯಾಂಡ್​ಲಾರ್ಡ್ಸ್​ (Licensed Landlords) ಹುದ್ದೆಗಳು ಖಾಲಿ ಇದ್ದು, ಪಿಯುಸಿ, ಡಿಪ್ಲೋಮಾ, ಬಿಇ, ಬಿ.ಟೆಕ್​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಸಕ್ತರು ಆನ್​ಲೈನ್​ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ: ಕರ್ನಾಟಕ ರಾಜ್ಯ ಕಂದಾಯ ಇಲಾಖೆ

ಹುದ್ದೆ: ಲೈಸೆನ್ಸ್​ಡ್​​ ಲ್ಯಾಂಡ್​ಲಾರ್ಡ್ಸ್

ಒಟ್ಟು ಹುದ್ದೆ: 2000

ವಿದ್ಯಾರ್ಹತೆ: ಪಿಯುಸಿ, ಡಿಪ್ಲೊಮಾ, ಎಂಜಿನಿಯರಿಂಗ್ 

ವೇತನ: ನಿಯಮಾನುಸಾರ

ಉದ್ಯೋಗದ ಸ್ಥಳ: ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 20, 2023

ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಹುದ್ದೆಗಳಿವೆ?

ಉಡುಪಿ- 86, ಉತ್ತರ ಕನ್ನಡ- 75, ಕೊಡಗು- 25, ಕೋಲಾರ- 53, ಗದಗ- 54, ಚಿಕ್ಕಮಗಳೂರು- 83, ಚಿತ್ರದುರ್ಗ- 73, ಚಾಮರಾಜನಗರ- 35, ತುಮಕೂರು- 110, ದಕ್ಷಿಣ ಕನ್ನಡ- 36, ದಾವಣಗೆರೆ- 95, ಧಾರವಾಡ- 92, ಬೆಂಗಳೂರು ಗ್ರಾಮಾಂತರ- 66, ಬೆಂಗಳೂರು ಜಿಲ್ಲೆ- 125, ಬಿಜಾಪುರ- 32, ಬೆಳಗಾವಿ - 85 ಬಳ್ಳಾರಿ- 55, ವಿಜಯನಗರ- 47, ಬಾಗಲಕೋಟೆ- 47, ಬೀದರ್- 35, ಮಂಡ್ಯ- 71, ಮೈಸೂರು- 40, ಯಾದಗಿರಿ- 20, ರಾಮನಗರ - 100, ರಾಯಚೂರು- 40, ಶಿವಮೊಗ್ಗ- 125z ಹಾವೇರಿ- 152, ಹಾಸನ- 60, ಕೊಪ್ಪಳ- 28, ಕಲಬುರಗಿ- 10, ಚಿಕ್ಕಬಳ್ಳಾಪುರ- 45, ಒಟ್ಟು -2000 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಲೈಸೆನ್ಸ್​ಡ್​​ ಲ್ಯಾಂಡ್​ಲಾರ್ಡ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪಿಯುಸಿ, ಡಿಪ್ಲೋಮಾ, ಬಿಇ/ಬಿ.ಟೆಕ್​, ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಲೈಸೆನ್ಸ್​ಡ್​​ ಲ್ಯಾಂಡ್​ಲಾರ್ಡ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 20, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅನುಭವ:

ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಲ್ಯಾಂಡ್ ಸರ್ವೇ ರೆವೆನ್ಯೂ ಸಿಸ್ಟಮ್​ನಲ್ಲಿ ಕನಿಷ್ಠ 10 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಅರ್ಜಿ ಶುಲ್ಕ:

ಎಲ್ಲಾ ಅಭ್ಯರ್ಥಿಗಳು 1000 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಪಾವತಿಸುವ ವಿಧಾನ- ಆನ್​ಲೈನ್​

ಇತರೆ ಶುಲ್ಕ:

ಟ್ರೈನಿಂಗ್ ಶುಲ್ಕ- 5000 ರೂ. (ಡಿಮ್ಯಾಂಡ್ ಡ್ರಾಫ್ಟ್​)

ಲೈಸೆನ್ಸ್​ ಶುಲ್ಕ- 3000 ರೂ.

ಆಯ್ಕೆ ಪ್ರಕ್ರಿಯೆ: ಆನ್​ಲೈನ್​ ಟೆಸ್ಟ್ ​ಲಿಖಿತ ಪರೀಕ್ಷೆ

ವೇತನ: ನಿಗದಿಪಡಿಸಿಲ್ಲ

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/02/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 20, 2023

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಫೋನ್ ನಂಬರ್- 080-22221038 ಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರೊಳಗೆ ಕರೆ ಮಾಡಿ.

ನವೀನ ಹಳೆಯದು