ಬಾಗಲಕೋಟೆ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 26 ರಂದು ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ಜಿಲ್ಲಾಡಳಿತ ಭವನ ರೂ.ನಂ. 135ರಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ನೇರ ಸಂದರ್ಶನದಲ್ಲಿ ಹಲವಾರು ಖಾಸಗಿ ಕಂಪನಿಗಳು ಭಾಗವಹಿಸಿ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. 18 ರಿಂದ 35 ವಯೋಮಿತಿಯಲ್ಲಿರುವ ಎಸ್.ಎಸ್.ಎಲ್.ಸಿ, ಐಟಿಐ (ಫಿಟ್ಟರ್, ಇಲೇಟ್ರಿಕಲ್, ಆಟೋಮೊಬೈಲ್), ಪಿಯುಸಿ ಹಾಗೂ ಯಾವುದೇ ಪದವೀಧರರು ಭಾಗವಹಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋ ಡಾಟಾ ಮತ್ತು ಮೂಲ ಅಂಕ ಪಟ್ಟಿಗಳ ಝರಾಕ್ಸ ಪ್ರತಿಗಳೊಂದಿಗೆ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08354-235337, 7676692029, 7019606100ಗೆ ಸಂಪರ್ಕಿಸಬಹುದಾಗಿದೆ.