ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2023ರ ಫಲಿತಾಂಶ ಇಂದು (ಜೂನ್ 20, ಮಂಗಳವಾರ) ಪ್ರಕಟಗೊಳ್ಳಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಪ್ರಕಟಿಸಲಿದೆ.ವಿದ್ಯಾರ್ಥಿಗಳು ಬೆಳಿಗ್ಗೆ 11 ಗಂಟೆಯ ಬಳಿಕ http://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಮಂಡಳಿ ತಿಳಿಸಿದೆ.ಮೇ 23 ರಿಂದ ಜೂನ್ 3ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದವು.