ಬೋರ್ವೆಲ್ ಕೊರೆಯುವ ವೇಳೆ ಬೋರ್ವೆಲ್ ಹಾಕುವ ವಾಹನಕ್ಕೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎಂಜಿನ್ ಸ್ಪಾರ್ಕ್ ಆಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿಯಿಂದ ಲಾರಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಮುಧೋಳ ಅಗ್ನಿ ಶಾಮಕದಳದ ಸಿಬ್ಬಂದಿಯಿಂದ ಬೆಂಕಿ ಆರಿಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಜೀವಹಾನಿ ಆಗಿಲ್ಲ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.