ಬಾಗಲಕೋಟೆ ಅಂಚೆ ಪ್ರತಿನಿಧಿಗಳ ಹುದ್ದೆಗೆ ನೇರ ಸಂದರ್ಶನ


ಬಾಗಲಕೋಟೆ: ಜಿಲ್ಲಾ ವಿಭಾಗದಲ್ಲಿ ಅಂಚೆ ಜೀವವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾವನೆ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜು.10 ರಂದು ಬೆಳಗ್ಗೆ 11.00 ಗಂಟೆಗೆ ಬಾಗಲಕೋಟೆ ಸ್ಟೇಶನ ರಸ್ತೆ ಬಳಿಯಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.


ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರುವುದು & 18 ರಿಂದ 50 ವರ್ಷಗಳು ವಯೋಮಿತಿ ಇರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ಕಂಪನಿಗಳ ಮಾಜಿ ಹಾಗೂ ಸಲಹೆಗಾರರು, ಮಾಜಿ ಸೈನಿಕರು ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಜಸವೆಂದು ಕಂಡು ಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.

ನುರಿತ, ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು ರೂ.5000 ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ.

ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ, ಸೂಕ್ತ ಕಮೀಶನ ನೀಡಲಾಗುವುದು." ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು  ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ನವೀನ ಹಳೆಯದು